Languages

ತಗ್ಗರ್ಸೆ ಶಾಲೆಗೆ 1.20ಲಕ್ಷ ಮೌಲ್ಯದ ಸ್ಮಾರ್ಟ್ ಕ್ಲಾಸ್, ಪೀಠೋಪಕರಣ ಉದ್ಘಾಟನೆ

  • February 25, 2022
  • By Admin: admin
  • Comments: Comments off

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ ಇಲ್ಲಿಗೆ ಒಟ್ಟು ರೂ.1,20,000 ಮೌಲ್ಯದ ಸ್ಮಾರ್ಟ್ ಕ್ಲಾಸ್, ಕಲಿಕಾ ಕುರ್ಚಿಗಳು ಹಾಗೂ ಡೆಸ್ಕ್ ಬೆಂಚ್ ಕೊಡುಗೆಯಾಗಿ ನೀಡಲಾಯಿತು.

ಸ್ಮಾರ್ಟ್ ಕ್ಲಾಸ್ ಹಾಗೂ ಪೀಠೋಪಕರಣಗಳನ್ನು ಉದ್ಘಾಟಿಸಿದ ಮ್ಯಾನೇಜಿಂಗ್ ಟ್ರಸ್ಟೀ, ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಜೀವನದಲ್ಲಿ ಕನಸು ಕಂಡರಷ್ಟೇ ಸಾಲದು. ಅದನ್ನು ನನಸಾಗಿಸಿಕೊಳ್ಳುವ ತನಕ ಛಲ ಹಾಗೂ ಗುರಿ ಮುಟ್ಟುವ ಭರವಸೆ ಇರಬೇಕು ಎಂದರು.

ತಗ್ಗರ್ಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾದ ಟಿ. ನಾರಾಯಣ ಹೆಗ್ಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಗೆ ಒಟ್ಟು ರೂ.1,20,000 ಮೌಲ್ಯದ ಸ್ಮಾರ್ಟ್ ಕ್ಲಾಸ್, ಕಲಿಕಾ ಕುರ್ಚಿಗಳು ಹಾಗೂ ಡೆಸ್ಕ್ ಬೆಂಚ್ ಕೊಡುಗೆಯಾಗಿ ಕೊಡುಗೆಯಾಗಿ ನೀಡಿದ ಡಾ. ಗೋವಿಂದ ಬಾಬು ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಶಿಕ್ಷಣ ಸಂಯೋಜಕ ಚಂದ್ರ ದೇವಾಡಿಗ, ಬೈಂದೂರು ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಬೈಂದೂರು ಸಿಆರ್ಪಿ ಸಿ. ಎನ್. ಬಿಲ್ಲವ, ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಪ್ರಭಾಕರ ಗಾಣಿಗ, ಉಪಾಧ್ಯಕ್ಷರಾದ ಸುಮತಿ ಮೊಗವೀರ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಸಂತ ಮೊಗವೀರ, ಕಾರ್ಯದರ್ಶಿ ಮಂಜುನಾಥ ಪೂಜಾರಿ ತಗ್ಗರ್ಸೆ, ಹಿರಿಯ ಶಿಕ್ಷಕಿ ಅಂಬಾಬಾಯಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಧ್ಯಾಯಿನಿ ಜ್ಯೋತಿ ಹೆಚ್., ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿಯರಾದ ಮಾಲತಿ ಸ್ವಾಗತಿಸಿ, ಸಂಗೀತಾ ವಂದಿಸಿದರು. ಸಹಶಿಕ್ಷಕಿ ಸಾರಿಕಾ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿಯರಾದ ನಾಗರತ್ನ, ಅಕ್ಷತಾ ಸಹಕರಿಸಿದರು.